ಕರ್ನಾಟಕ

karnataka

ETV Bharat / videos

ಸರಳ, ಸಂಭ್ರಮದ ರಾಜ್ಯೋತ್ಸವ.. ಸಚಿವ ಶಿವರಾಮ್​ ಹೆಬ್ಬಾರ್ ಧ್ವಜಾರೋಹಣ - Covid cautionary measures'

By

Published : Nov 1, 2020, 11:33 AM IST

ಕಾರವಾರ: ಕೋವಿಡ್​ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸುವ ಮೂಲಕ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ 65ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್​ ಹೆಬ್ಬಾರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಪರೇಡ್ ತಂಡಗಳಿಂದ ಗೌರವ ವಂದನೆಗಳನ್ನು ಸ್ವೀಕರಿಸಿ ಆಕರ್ಷಕ ಪಥಸಂಚಲನವನ್ನು ನಡೆಸಲಾಯಿತು. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸ್ಥಳೀಯ ಶಾಸಕಿ ರೂಪಾಲಿ ನಾಯ್ಕ ಕಾರ್ಯಕ್ರಮದಲ್ಲಿದ್ದರು.

ABOUT THE AUTHOR

...view details