ವಿದ್ಯಾರ್ಥಿಗಳನ್ನು ಬೆನ್ನಟ್ಟಿದ ಬೀದಿ ನಾಯಿಗಳು.. ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ - ವಿದ್ಯಾರ್ಥಿಗಳನ್ನು ಬೆನ್ನಟ್ಟಿದ ಬೀದಿ ನಾಯಿಗಳು
ಕಣ್ಣೂರು(ಕೇರಳ): ಕೇರಳದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಶ್ವಾನಗಳ ಅಟ್ಟಹಾಸಕ್ಕೆ ಸಿಲುಕಿ ಕೆಲವರು ಸಾವನ್ನಪ್ಪಿದ್ದರೆ, ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮಧ್ಯೆ ವಿದ್ಯಾರ್ಥಿಗಳು ಮತ್ತು ಸ್ಥಳೀಯರನ್ನು ಬೀದಿನಾಯಿಗಳು ಬೆನ್ನಟ್ಟಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಯನಾಕವಾಗಿದೆ. ಈ ವೇಳೆ ಕೂದಲೆಳೆಯ ಅಂತರದಲ್ಲಿ ವಿದ್ಯಾರ್ಥಿಗಳು ಬಚಾವಾಗಿದ್ದಾರೆ. ಕೇರಳದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ ಎಂದು ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಈ ವೇಳೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಜೆ.ಕೆ. ಮಹೇಶ್ವರಿ ಅವರನ್ನು ಒಳಗೊಂಡ ಪೀಠ ಬೀದಿ ನಾಯಿಗಳಿಗೆ ಆಹಾರ ಹಾಕಿದವರೇ ಅದರಿಂದ ಹಾನಿಯಾದವರಿಗೆ ಚಿಕಿತ್ಸೆ ವೆಚ್ಚವಬನ್ನು ಭರಿಸಬೇಕು ಎಂದು ಆದೇಶಿಸಿತ್ತು. ಕಣ್ಣೂರಿನಲ್ಲಿ ರೆಕಾರ್ಡ್ ಆಗಿರುವ ಸಿಸಿಟಿವಿ ವಿಡಿಯೋದಲ್ಲಿ ವಿದ್ಯಾರ್ಥಿಗಳು ಓಡಿ ಬಂದು ಮನೆಯ ಗೇಟ್ ಒಳಗೆ ಸೇರಿಕೊಂಡು ನಾಯಿಗಳಿಂದ ತಪ್ಪಿಸಿಕೊಂಡಿದ್ದಾರೆ. ಹಾಗೇ ಸ್ಥಳೀಯರೊಬ್ಬರು ಸಹ ನಾಯಿ ಕಚ್ಚುವುದರಿಂದ ತಪ್ಪಿಸಿಕೊಳ್ಳುವುದನ್ನು ವಿಡಿಯೋದಲ್ಲಿ ಕಾಣಬಹುದು.
Last Updated : Sep 13, 2022, 8:03 AM IST