ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಿಸಾನ್ ಸೆಲ್ ಪ್ರತಿಭಟನೆ - Shimoga Kisan Cell Protest
ಶಿವಮೊಗ್ಗ: ಭೂ ಸುಧಾರಣಾ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಕಾಂಗ್ರೆಸ್‌ನ ಜಿಲ್ಲಾ ಕಿಸಾನ್ ಘಟಕ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಿಸಾನ್ ಸೆಲ್ ಕಾರ್ಯಕರ್ತರು, ಬಿಜೆಪಿ ಸರ್ಕಾರ ಕಾರ್ಪೊರೇಟ್ ವಲಯಕ್ಕೆ ಅನುಕೂಲ ಮಾಡಿ ಕೊಡುವ ದೃಷ್ಟಿಯಿಂದ ಭೂ ಸುಧಾರಣಾ ಕಾಯ್ದೆಯನ್ನು ತಿದ್ದುಪಡಿ ಮಾಡಿದೆ. ಇದರಿಂದ ಸಣ್ಣ ಹಿಡುವಳಿದಾರರು ಜಮೀನು ಮಾರಿ ಬೀದಿ ಪಾಲಾಗಬೇಕಾಗುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ತಕ್ಷಣ ಈ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಎಡಿಸಿ ಅನುರಾಧ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗಿದೆ.