ನಿಮ್ಮ ಕೈಲಿ ಆಗದಿದ್ದರೆ ರಾಷ್ಟ್ರಪತಿ ಆಳ್ವಿಕೆ ಹೇರಿ.. ಸರ್ಕಾರಕ್ಕೆ ಡಿಕೆಶಿ ಟಾಂಗ್ - ಈಟಿವಿ ಭಾರತ ಕರ್ನಾಟಕ
ಚೆನ್ನೈ(ತಮಿಳುನಾಡು): ಬೆಂಗಳೂರಿನ ಸದ್ಯದ ಪರಿಸ್ಥಿತಿಗೆ ಈ ಹಿಂದಿನ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. 'ಭಾರತ್ ಜೋಡೋ' ಯಾತ್ರೆ ಆರಂಭಕ್ಕೂ ಮುನ್ನ ಶ್ರೀಪೆರಂಬದೂರಿನಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಬಿಜೆಪಿ, ಬೊಮ್ಮಾಯಿ ಸರ್ಕಾರ ಅಧಿಕಾರದಲ್ಲಿದೆ. ಸಮಸ್ಯೆ ಬಗೆಹರಿಸಿ. ನಿಮ್ಮ ಕೈಲಿ ಆಗದಿದ್ದರೆ, ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬರಲಿ. ನಾವು ಅಧಿಕಾರಕ್ಕೆ ಬಂದು ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದಿದ್ದಾರೆ.