ಓವರ್ಟೇಕ್ ಮಾಡಲು ಹೋಗಿ ಕಬ್ಬಿನ ಗದ್ದೆಗೆ ನುಗ್ಗಿದ ಸಾರಿಗೆ ಬಸ್ : 50 ವಿದ್ಯಾರ್ಥಿಗಳು ಪಾರು - 50 ವಿದ್ಯಾರ್ಥಿಗಳು ಪಾರು
ಮಂಡ್ಯ : ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊತ್ತು ಮೇಲುಕೋಟೆಯಿಂದ ಮಂಡ್ಯಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಜಮೀನಿಗೆ ನುಗ್ಗಿರುವ ಘಟನೆ ಜಿಲ್ಲೆಯ ದುದ್ದ ಗ್ರಾಮದ ಬಳಿ ನಡೆದಿದೆ. ಟ್ರಾಕ್ಟರ್ ಅನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಏಕಾಏಕಿ ಅಡ್ಡಬಂದ ಟ್ರ್ಯಾಕ್ಟರ್ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಜಮೀನಿಗೆ ನುಗ್ಗಿದೆ. ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಶಿವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.