ಪಣಿಯಾಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ - Anantha Padmanabha Temple renovation work
ಇತಿಹಾಸ ಪ್ರಸಿದ್ಧ ಪಣಿಯಾಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಜೀರ್ಣೋದ್ದಾರಕ್ಕೆ ಮುನ್ನ ನಡೆಯುವ ಧಾರ್ಮಿಕ ವಿಧಿ ವಿಧಾನಗಳು, ವಿಶೇಷ ಪೂಜೆ, ಹೋಮ ಹವನಗಳನ್ನು ನಡೆಸಲಾಯಿತು. ಸುಮಾರು 5 ಕೋಟಿ ರೂ.ವೆಚ್ಚದಲ್ಲಿ ದೇವಸ್ಥಾನದ ಗರ್ಭಗುಡಿ, ಸುತ್ತುಪೌಳಿ, ತೀರ್ಥ ಮಂಟಪ, ದೇಗುಲದ ಸರೋವರ ನೂತನವಾಗಿ ನಿರ್ಮಾಣವಾಗಲಿದೆ. ಮೇ ತಿಂಗಳಲ್ಲಿ ದೇಗುಲ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ. ಬ್ರಹ್ಮಕಲಶೋತ್ಸವ ತನಕ ಶ್ರೀ ಅನಂತಪದ್ಮನಾಭ ದೇವರಿಗೆ ಬಾಲ ಆಲಯದಲ್ಲಿ ಪೂಜೆ-ಪುನಸ್ಕಾರಗಳು ಜರುಗಲಿವೆ.