ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಪೀಠಕ್ಕೆ ಹಿಜಾಬ್ ವಿವಾದ: ಹೈಕೋರ್ಟ್ ವಕೀಲರ ಅಭಿಪ್ರಾಯ ಹೀಗಿದೆ
ಬೆಂಗಳೂರು: ರಾಜ್ಯದಲ್ಲಿ ಶಾಲಾ ಕಾಲೇಜುಗಳ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ನಿಷೇಧ ಹೇರಿ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿದೆ. ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಹೊರಬಿದ್ದಿದೆ. ಹೀಗಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರ ಪೀಠದಿಂದ ಅಂತಿಮ ತೀರ್ಪು ಹೊರ ಬೀಳಲಿದೆ. ಈ ಬಗ್ಗೆ ಹೈಕೋರ್ಟ್ನ ಹಿರಿಯ ವಕೀಲರುಗಳಾದ ಅಮೃತೇಶ್ ಎನ್.ಪಿ ಹಾಗೂ ರಹಮತ್ ಉಲ್ಲಾ ಕೊತ್ವಾಲ್ ಈಟಿವಿ ಭಾರತದೊಂದಿಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.