ಲಾರಿಗಳ ನಡುವೆ ಅಪಘಾತ, ಕೂದಲೆಳೆ ಅಂತರದಲ್ಲಿ ಪಾರಾದ ರೈತ: ಸಿಸಿಟಿವಿ ವಿಡಿಯೋ - ಹುಬ್ಬಳ್ಳಿ ಲಾರಿ ಅಪಘಾತದ ಸಿಸಿಟಿವಿ ದೃಶ್ಯ
ಹುಬ್ಬಳ್ಳಿ: ಮರಳು ತುಂಬಿದ್ದ ಟಿಪ್ಪರ್ ತಿರುವು ತೆಗೆದುಕೊಳ್ಳುತ್ತಿದ್ದಾಗ ಮತ್ತೊಂದು ಲಾರಿ ಡಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾದ ಘಟನೆ ತಾಲೂಕಿನ ಕುಸುಗಲ್ ಗ್ರಾಮದ ಗಾಂಧಿ ಕಟ್ಟಿ ಬಳಿ ಗುರುವಾರ ಸಂಭವಿಸಿದೆ. ಇದೇ ಸಂದರ್ಭದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನೋರ್ವ ಕೂದಲೆಳೆ ಅಂತರದಲ್ಲಿ ಅವಘಡದಿಂದ ಪಾರಾಗಿದ್ದಾನೆ. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.