ತುಮಕೂರು: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಲಾರಿ - lorry hits divider in tumakuru
ತುಮಕೂರು ತಾಲೂಕಿನ ಗೂಳೂರು ಗ್ರಾಮದ ಕೊಂಡಾಪುರ ಕ್ರಾಸ್ನಲ್ಲಿಂದು ಬೆಳಗಿನ ಜಾವ ಎಳನೀರು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರೋಡ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಸುಟ್ಟು ಕರಕಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.