ವಡೋದರಾದ ದೀಪಕ್ ನೈಟ್ರೇಟ್ ಕಂಪನಿಯಲ್ಲಿ ಭಾರಿ ಅಗ್ನಿ ಅವಘಡ: ಏಳು ಮಂದಿಗೆ ಗಂಭೀರ ಗಾಯ - Deepak Nytrate Company
ವಡೋದರಾ ನಗರದ ನಂದೇಸರಿ ಪ್ರದೇಶದಲ್ಲಿ ದೀಪಕ್ ನೈಟ್ರೇಟ್ ಎಂಬ ಕಂಪನಿಯಲ್ಲಿ ಸ್ಫೋಟ ಸಂಭವಿಸಿದ್ದು, ಭಾರಿ ಬೆಂಕಿ ಕಾಣಿಸಿಕೊಂಡಿದೆ. 10 ರಿಂದ 15 ಕಿ.ಮೀ ವ್ಯಾಪ್ತಿವರೆಗೆ ಸ್ಫೋಟದ ಶಬ್ದ ಕೇಳಿಬಂದಿತ್ತು. ಸ್ಫೋಟದಲ್ಲಿ ಏಳು ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ನಾಲ್ಕು ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಸುತ್ತಮುತ್ತಲಿನ ಗ್ರಾಮಗಳ 700 ಜನರನ್ನು ಸ್ಥಳಾಂತರಿಸಲಾಗಿದೆ. ಗುಜರಾತ್ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಆರ್.ಬಿ. ತ್ರಿವೇದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ರಾಸಾಯನಿಕ ಗೋದಾಮಿನಲ್ಲಿನ ಪ್ರತಿಕ್ರಿಯೆಯ ಅನಾನುಕೂಲತೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ.