ಬೆಂಗಳೂರಿನಲ್ಲಿ ದಾಖಲೆಯ ಮಳೆ: ಜಲಾವೃತಗೊಂಡ ರಸ್ತೆ, ಟ್ರಾಫಿಕ್ ಜಾಮ್ ನೋಡಿ! - ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಬೆಂಗಳೂರು: ಕಳೆದೊಂದು ವಾರದಿಂದ ಸುರಿಯುತ್ತಿರುವ ಮಹಾಮಳೆಗೆ ಬೆಂಗಳೂರು ಸಂಪೂರ್ಣ ಜಲಾವೃತಗೊಂಡಿದ್ದು ನಗರದ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ರಸ್ತೆಗಳಲ್ಲಿ ನದಿಗಳ ರೀತಿ ನೀರು ಹರಿಯುತ್ತಿದೆ. ಸರ್ಜಾಪುರ, ಬೆಳ್ಳಂದೂರು ಮಾರತಹಳ್ಳಿ, ಔಟರ್ ರಿಂಗ್ರೋಡ್ಗಳಲ್ಲಿ ನೀರು ನಿಂತಿದ್ದು, ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ನಗರದ ಅಲ್ಲಲ್ಲಿ ಟ್ರಾಫಿಕ್ ಜಾಮ್ ವಿಪರೀತವಾಗಿದೆ. ಮಾರತ್ತಹಳ್ಳಿ-ಸಿಲ್ಕ್ ಬೋರ್ಡ್ ರಸ್ತೆ ಸಂಪೂರ್ಣವಾಗಿ ನೀರಿನಿಂದ ಆವರಿಸಿಕೊಂಡಿದ್ದು ಸಂಚಾರ ದಟ್ಟಣೆಗೆ ಸಾರ್ವಜನಿಕರು ಹೈರಾಣಾಗಿದ್ದಾರೆ.