ವಿಡಿಯೋ: ಲೀಲಾವತಿ ಆಸ್ಪತ್ರೆಯಲ್ಲಿ ಪತ್ನಿ ನವನೀತ್ ಆರೋಗ್ಯ ವಿಚಾರಿಸಿದ ಶಾಸಕ ರವಿ ರಾಣಾ! - ಶಾಸಕ ರವಿ ರಾಣಾ
ಮುಂಬೈ: ಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಸಂಸದೆ ನವನೀತ್ ಕೌರ್ ಹಾಗೂ ಶಾಸಕ ರವಿ ರಾಣಾ ಜಾಮೀನು ಮೇಲೆ ಇಂದು ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ನವನೀತ್ ಕೌರ್ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಅಲ್ಲಿಗೆ ಭೇಟಿ ನೀಡಿರುವ ಪತಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಅಮರಾವತಿ ಸಂಸದೆ ನವನೀತ್ ಕೌರ್ ರಾಣಾ ಹಾಗೂ ಪತಿ ರವಿ ರಾಣಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಎದುರುಗಡೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಣೆ ಮಾಡಿದ್ದರು. ಈ ಪ್ರಕರಣದಲ್ಲಿ ಇವರ ವಿರುದ್ಧ ಏಪ್ರಿಲ್ 23ರಂದು ರಾಜ್ಯದ್ರೋಹ ಆರೋಪದಡಿ ಪ್ರಕರಣ ದಾಖಲು ಮಾಡಿ, ಬಂಧನ ಮಾಡಲಾಗಿತ್ತು. ಏಪ್ರಿಲ್ 25ರಂದು ನವನೀತ್ ಕೌರ್ ಹಾಗೂ ರವಿ ರಾಣಾ ಸೆಷನ್ಸ್ ಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ಅವರು ಬಿಡುಗಡೆಯಾಗಿದ್ದಾರೆ.