ಕರ್ನಾಟಕ

karnataka

ETV Bharat / videos

ನೂಪುರ್ ಹೇಳಿಕೆ​ ಖಂಡಿಸಿ ದೇಶದ ಹಲವೆಡೆ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ; ಪೊಲೀಸರ ಮೇಲೆ ಕಲ್ಲು - ಉದ್ರಿಕ್ತರಿಂದ ಪೊಲೀಸರ ಮೇಲೆ ಕಲ್ಲು ತೂರಾಟ

By

Published : Jun 10, 2022, 4:36 PM IST

Updated : Jun 10, 2022, 4:45 PM IST

ಬಿಜೆಪಿ ನಾಯಕಿ ನೂಪುರ್ ಶರ್ಮಾ ಪ್ರವಾದಿ ಮಹಮ್ಮದ್ ಪೈಗಂಬರ್‌ ಕುರಿತು ನೀಡಿರುವ ವಿವಾದಿತ ಹೇಳಿಕೆ ಖಂಡಿಸಿ, ದೇಶದ ಬಹುತೇಕ ಎಲ್ಲ ನಗರಗಳಲ್ಲೂ ಶುಕ್ರವಾರದ ಪ್ರಾರ್ಥನೆ ಮುಗಿಸಿದ ಬಳಿಕ ಮುಸ್ಲಿಮರು ಹಿಂಸಾತ್ಮಕ ಪ್ರತಿಭಟನೆಗೆ ಇಳಿದಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್​​ರಾಜ್​​ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪ್ರತಿಭಟನಾಕಾರರನ್ನು ಹತೋಟಿಗೆ ತರುವ ಉದ್ದೇಶದಿಂದ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ತೆಲಂಗಾಣ, ಜಮ್ಮು-ಕಾಶ್ಮೀರ, ಲೂಧಿಯಾನ​, ಪಶ್ಚಿಮ ಬಂಗಾಳದಲ್ಲೂ ಪ್ರತಿಭಟನೆ ನಡೆಯುತ್ತಿದೆ.
Last Updated : Jun 10, 2022, 4:45 PM IST

ABOUT THE AUTHOR

...view details