ಚಂಡೀಗಢ ವಿವಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಲೀಕ್ ವಿರುದ್ಧ ಬೃಹತ್ ಪ್ರತಿಭಟನೆ - ಚಂಡೀಗಢ ವಿವಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಲೀಕ್
ಹುಡುಗಿಯೊಬ್ಬಳು ತನ್ನ ಹಾಸ್ಟೆಲ್ ಸಹಪಾಠಿಗಳು ಸ್ನಾನ ಮಾಡುತ್ತಿರುವ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಇತರರ ಜೊತೆ ಹಂಚಿಕೊಂಡಿದ್ದರ ವಿರುದ್ಧ ವಿದ್ಯಾರ್ಥಿನಿಯರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಘಟನೆಯನ್ನು ಸರ್ಕಾರ ತನಿಖೆಗೆ ಸೂಚಿಸಿದ್ದು, ಆರೋಪಿ ವಿದ್ಯಾರ್ಥಿನಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ ವಿದ್ಯಾರ್ಥಿನಿಯರು ಕಾಲೇಜು ಮುಂಭಾಗ ಜಮಾಯಿಸಿ ಘೋಷಣೆ ಕೂಗಿದರು.