ಮೋದಿ, ಮೋದಿ; ಜೈ ಶ್ರೀರಾಮ್... ಟೋಕಿಯೋದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ - ಅನಿವಾಸಿ ಭಾರತೀಯರನ್ನುದ್ದೇಶಿಸಿ ನಮೋ ಭಾಷಣ
ಟೋಕಿಯೋ(ಜಪಾನ್): ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಟೋಕಿಯೋದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಪ್ರಧಾನಿ ವೇದಿಕೆ ಹತ್ತಿರ ಬರುತ್ತಿದ್ದಂತೆ ಮೋದಿ, ಮೋದಿ, ಜೈಶ್ರೀರಾಮ್ ಎಂಬ ಘೋಷಣೆ ಮೊಳಗಿದವು. ಈ ವೇಳೆ, ಮಾತನಾಡಿದ ನಮೋ, ನಾನು ಜಪಾನ್ಗೆ ಬಂದಾಗಲೆಲ್ಲ ಇಲ್ಲಿನ ಜನರಿಂದ ಅಪಾರ ಪ್ರೀತಿ ಸಿಗುತ್ತದೆ. ಭಾರತದ ಅನೇಕರು ಜಪಾನ್ನಲ್ಲಿ ಉಳಿದುಕೊಂಡು, ಇಲ್ಲಿನ ಸಂಸ್ಕೃತಿ ಅಳವಡಿಸಿಕೊಂಡಿದ್ದೀರಿ. ಆದರೂ, ಭಾರತದ ಸಂಸ್ಕೃತಿ ಮತ್ತು ಭಾಷೆ ಬಗ್ಗೆ ಅಪಾರ ಪ್ರೀತಿ ಹೊಂದಿರುವುದು ಹೆಮ್ಮೆಯ ವಿಚಾರ ಎಂದರು.