ಕಾರು ಚೇಸ್ ಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ರೂಪಾಯಿ ವಶ: ವಿಡಿಯೋ - ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ರೂಪಾಯಿ ವಶ
ಹಾವೇರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸಿನಿಮೀಯ ಮಾದರಿಯಲ್ಲಿ ಚೇಸ್ ಮಾಡಿ ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿಯಿಂದ ಶಿವಮೊಗ್ಗಕ್ಕೆ ಹಣವನ್ನು ಸಾಗಿಸುತ್ತಿದ್ದ ಮಾಹಿತಿ ಅರಿತ ಪೊಲೀಸರು ದಾಳಿ ಮಾಡಿದರು. ಆರೋಪಿಗಳು ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋದರೂ ಬಿಡದೇ ಬೆನ್ನುಬಿದ್ದು ಹಿಡಿದಿದ್ದಾರೆ. ಫಯಾಜಖಾನ್, ಇಮ್ರಾನ್ ಖಾನ್, ಸದ್ಧಾಂಖಾನ್, ಸೈಯ್ಯದ್ ಅಮೀನ್ರನ್ನು ಎಂಬುವರನ್ನು ಬಂಧಿಸಲಾಗಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.