ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸಚಿನ್ ಪೈಲಟ್ ಪೊಲೀಸ್ ವಶಕ್ಕೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದರ ವಿರುದ್ಧ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಭಾರಿ ನೂಕಾಟ ನಡೆಯಿತು. ಪೈಲಟ್ ವಶಕ್ಕೆ ಪಡೆಯಲು ಬಂದ ಪೊಲೀಸರ ವಿರುದ್ಧ ಕೈ ಕಾರ್ಯಕರ್ತರು ವಾಕ್ಸಮರ ನಡೆಸಿದರು.