ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪಾನಮತ್ತ ಪೊಲೀಸ್ ಕಾನ್ಸ್ಟೇಬಲ್: ವಿಡಿಯೋ ವೈರಲ್ - ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದ ಪೊಲೀಸ್ ವಿಡಿಯೋ ವೈರಲ್
ಬರ್ನಾಲ(ಪಂಜಾಬ್): ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಯುವಕನ ಕಾಲು ಮುರಿದು ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ. ಬರ್ನಾಲ ಜಿಲ್ಲೆಯ ಬಜಖಾನ ರಸ್ತೆಯ ಸೇತುವೆ ಮೇಲೆ ಈ ಘಟನೆ ನಡೆದಿದೆ. ಪ್ರಕರಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸ್ ಕಾನ್ಸ್ಟೇಬಲ್ ಅಮಲಿನಲ್ಲಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಸ್ಥಳಕ್ಕೆ ಆಗಮಿಸಿದ ಬರ್ನಾಲಾ ಪೊಲೀಸ್ ಸಿಬ್ಬಂದಿ ಚಾಲಕ(ಪೊಲೀಸ್ ಕಾನ್ಸ್ಟೇಬಲ್)ನನ್ನು ಕರೆದೊಯ್ದಿದ್ದಾರೆ. ಇನ್ನು ಸ್ಥಳದಲ್ಲಿದ್ದ ಸಾರ್ವಜನಿಕರು ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Last Updated : Jun 11, 2022, 12:37 PM IST
TAGGED:
ಪಂಜಾಬ್