ಆಹಾರ ಧಾನ್ಯಗಳ ಮೇಲಿನ ಜಿಎಸ್ಟಿ, ಬೆಲೆ ಏರಿಕೆಗೆ ಖಂಡನೆ.. ರಸ್ತೆ ಮೇಲೆ ರೊಟ್ಟಿ ಮಾಡಿ ಪ್ರತಿಭಟನೆ - ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ
ಕಲಬುರಗಿ : ಆಹಾರ ಧಾನ್ಯಗಳ ಮೇಲಿನ ಜಿಎಸ್ಟಿ ಏರಿಕೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕಲಬುರಗಿಯಲ್ಲಿ ಮಹಿಳೆಯರು ರಸ್ತೆ ಮೇಲೆ ರೊಟ್ಟಿ ತಟ್ಟುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಅಖಿಲ ಭಾರತೀಯ ಮಹಿಳಾ ಒಕ್ಕೂಟದ ನೇತೃತ್ವದಲ್ಲಿ ನೂರಾರು ಮಹಿಳೆಯರು ಗ್ಯಾಸ್ ಸಿಲಿಂಡರ್ ತಲೆ ಮೇಲೆ ಹೊತ್ತು ರಸ್ತೆ ಮೇಲೆಯೇ ರೊಟ್ಟಿ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಮಹಿಳೆಯರನ್ನು ತಡೆದು ಪ್ರತಿಭಟನೆ ನಡೆಸದಂತೆ ಮನವಿ ಮಾಡಿದ್ರು.