ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ - ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮುಂದೆ ಪ್ರತಿಭಟನೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ರಾಯಚೂರಿನ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ತಾಲೂಕಿನ ಹೊರವಲಯದಲ್ಲಿರುವ ಸಾಥ್ ಮೈಲ್ ಕ್ರಾಸ್ ಬಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿ ಮೊಟ್ಟೆ ಎಸೆದವರನ್ನು ಬಂಧಿಸುವಂತೆ ಒತ್ತಾಯಿಸಲಾಯಿತು.