ಕರ್ನಾಟಕ

karnataka

ETV Bharat / videos

ಸಿ ಟಿ ರವಿ ಪ್ರತಿಕೃತಿ ದಹನ: ಪ್ರತಿಭಟನಾಕಾರರು ಪೊಲೀಸರ ಮಧ್ಯೆ ತಳ್ಳಾಟ - ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ

By

Published : Sep 13, 2022, 1:54 PM IST

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅವಾಚ್ಯ ಶಬ್ಧ ಬಳಸಿದ ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ‌ ರವಿ ವಿರುದ್ಧ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಪುರಭವನದ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು ಸಿ.ಟಿ ರವಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಹಾಗೂ ತಳ್ಳಾಟ ನಡೆಯಿತು. ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಾಯಕ. ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಿ ಟಿ ರವಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಅವರನ್ನು ಬಿಜೆಪಿಯಿಂದ ವಜಾಗೊಳಿಸಬೇಕು. ಹೀಗೆ ಮುಂದುವರಿದರೆ ಸಿ ಟಿ ರವಿ ಮೈಸೂರಿಗೆ ಆಗಮಿಸಿದ ವೇಳೆ ಮಸಿ ಬಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ರವಾನಿಸಿದರು.

ABOUT THE AUTHOR

...view details