ಅಸ್ಸಾಂನಲ್ಲಿ ಮಹಾಮಳೆ: ಮೂವರು ಸಾವು, 25 ಸಾವಿರಕ್ಕೂ ಹೆಚ್ಚು ಮಂದಿಗೆ ಸಂಕಷ್ಟ! - ಅಸ್ಸಾಂನಲ್ಲಿ ಭಾರಿ ಮಳೆ ಹಲವು ಗ್ರಾಮಗಳು ಜಲಾವೃತ
ಅಸ್ಸಾಂ: ದೇಶದ ಈಶಾನ್ಯ ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದೆ. ಹೊಜೈ ಮತ್ತು ಪಶ್ಚಿಮ ಕರ್ಬಿ ಆಂಗ್ಲಾಂಗ್ ಜಿಲ್ಲೆಗಳನ್ನು ಸಂಪರ್ಕಿಸುವ ರಸ್ತೆ ನಿನ್ನೆ (ಶನಿವಾರ) ಪ್ರವಾಹದ ನೀರಿನಲ್ಲಿ ಮುಳುಗಿದೆ. ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇನ್ನೂ ಇದ್ದು ಹಲವು ಗ್ರಾಮಗಳು ಜಲಾವೃತಗೊಂಡಿವೆ. ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಹಫ್ಲಾಂಗ್ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ರಸ್ತೆಯ ಒಂದು ಭಾಗ ಕೊಚ್ಚಿ ಹೋಗಿದೆ. ಮಳೆ ಸಂಬಂಧಿ ಘಟನೆಗಳಲ್ಲಿ ಈಗಾಗಲೇ ಮೂವರು ಸಾವಿಗೀಡಾಗಿದ್ದು, 25 ಸಾವಿರಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೊಳಗಾಗಿದ್ದಾರೆ.
Last Updated : May 15, 2022, 11:25 AM IST