ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಬೇಕು, ಇಲ್ಲದಿದ್ದರೆ ದೇಶಾದ್ಯಂತ ಕಾರ್ಯಕರ್ತರಿಗೆ ನಿರಾಶೆ: ಸಿಎಂ ಗೆಹ್ಲೋಟ್ - ರಾಹುಲ್ ಗಾಂಧಿ ಅಧ್ಯಕ್ಷರಾಗಲಿ ಎಂದ ಅಶೋಕ್ ಗೆಹ್ಲೋಟ್
ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾಗಬೇಕು. ಇಲ್ಲದಿದ್ದರೆ ದೇಶಾದ್ಯಂತ ಕಾಂಗ್ರೆಸ್ಸಿಗರಿಗೆ ನಿರಾಸೆಯಾಗಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಅವರು ಕಾಂಗ್ರೆಸ್ ಕಾರ್ಯಕರ್ತರ ಭಾವನೆಗಳನ್ನು ಅರ್ಥಮಾಡಿಕೊಂಡು ಹುದ್ದೆಯನ್ನು ಸ್ವೀಕರಿಸಬೇಕು. ಇದು ಗಾಂಧಿ ಕುಟುಂಬ ಮತ್ತು ಗಾಂಧಿಯೇತರ ಕುಟುಂಬದ ನಡುವಿನ ಕಿತ್ತಾಟವಲ್ಲ. ಗಾಂಧಿ ಕುಟುಂಬದ ವಿರುದ್ಧ ಟೀಕಿಸುವ ಪ್ರಧಾನಿ ನರೇಂದ್ರ ಮೋದಿಗೆ ಅವರನ್ನು ಕಂಡರೆ ಯಾಕೆ ಭಯ ಎಂದು ಇದೇ ವೇಳೆ ಅವರು ಪ್ರಶ್ನಿಸಿದರು.