100ನೇ ವಸಂತಕ್ಕೆ ಕಾಲಿಟ್ಟ ಭಾರತೀಯ ನೌಕಾಪಡೆಯ ನಿವೃತ್ತ ಕಮಾಂಡರ್ ಶ್ರೀ ರಾಮುಲು - ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್
ವಿಶಾಖಪಟ್ಟಣಂ : ಭಾರತೀಯ ನೌಕಾಪಡೆಯ ನಿವೃತ್ತ ಕಮಾಂಡರ್ ಆಂದ್ರಪ್ರದೇಶದ ಶ್ರೀ ರಾಮುಲು 100ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಂಡರು. ಇವರು ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 95 ವರ್ಷ ವಯೋಮಿತಿಯ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ. 10 ಕಿ.ಮೀ ಮತ್ತು 20 ಕಿ.ಮೀ ನಡಿಗೆಯಲ್ಲಿ ಅನೇಕ ಅಂತಾರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ. ಶ್ರೀ ರಾಮುಲು ಅವರು ಸ್ನೇಹಿತ ಬಳಗದೊಂದಿಗೆ ಜನ್ಮದಿನ ಆಚರಿಸಿಕೊಂಡರು.