ಹಳ್ಳದಲ್ಲಿ ಕೊಚ್ಚಿಹೋದ ಮಹಿಳೆಯರು: ಸ್ಥಳಕ್ಕಾಗಮಿಸಿದ ಸಚಿವರ ಮೇಲೆ ಮುಗಿಬಿದ್ದ ಗ್ರಾಮಸ್ಥರು - ಸಚಿವ ಹಾಲಪ್ಪ ಆಚಾರ್ ವಿರುದ್ಧ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಸಂಕನೂರು ಗ್ರಾಮದ ಹಳ್ಳದಲ್ಲಿ ನಾಲ್ವರು ಮಹಿಳೆಯರು ಕೊಚ್ಚಿಕೊಂಡು ಹೋಗಿದ್ದಾರೆ. ಈ ಘಟನೆ ಬಗ್ಗೆ ತಿಳಿದು ಸಚಿವ ಹಾಲಪ್ಪ ಆಚಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಚಿವರು ಬರುತ್ತಿದ್ದಂತೆ ಗ್ರಾಮಸ್ಥರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ತಳ್ಳಾಟ, ನೂಕಾಟ ನಡೆದಿದ್ದು, ವಾತಾವರಣ ತಿಳಿಗೊಳಿಸಲು ಪೊಲೀಸರು ಹರಸಾಹಸಪಟ್ಟರು.