ಶಾಸಕ ಯತ್ನಾಳ್ ಗೆ ಬುದ್ಧಿ ಇಲ್ಲ.. ಸಿದ್ದರಾಮಯ್ಯ ವಾಗ್ದಾಳಿ - Siddaramaiah says Basavaraj Yatnal has no wit
ಮೈಸೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬುದ್ಧಿ ಇಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವವರ ಮನೆ ಹೊಕ್ಕು ಆರೋಪಿಗಳನ್ನು ಎಳೆದು ತರಬೇಕೆಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಯತ್ನಾಳ್ ಗೆ ಬುದ್ಧಿ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿ ಗಲಭೆ ಪ್ರಕರಣ ಸಂಬಂಧಿಸಿದಂತೆ, ಅಲ್ಲಿನ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದಿದ್ದೇನೆ ಎಂದರು. ಇದೇ ವೇಳೆ ಈಶ್ವರಪ್ಪ ರಾಜೀನಾಮೆ ಕುರಿತು ಅವರು ಮಾತನಾಡಿದರು.