ಪೌರತ್ವ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿ: ಡಿಸಿ ಕಚೇರಿ ಮುಂದೆ ಎಸ್‌ಡಿಪಿಐ ಪ್ರತಿಭಟನೆ - ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಸ್ ಡಿಪಿಐ
ಉದ್ದೇಶಿತ ಪೌರತ್ವ ತಿದ್ದುಪಡಿ ಮಸೂದೆಯನ್ನು(CAB) ಹಿಂಪಡೆಯಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಯಿತು. ಈ ಕಾಯ್ದೆ ಸಂವಿಧಾನ ವಿರೋಧಿ ಅಂಶಗಳನ್ನು ಒಳಗೊಂಡಿದೆ. ಸಂವಿಧಾನದಲ್ಲಿ ಪ್ರಜೆಗಳಿಗೆ ನೀಡಿದ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ. ಹಾಗಾಗಿ ಲೋಕಸಭೆಯಲ್ಲಿ ಅಂಗೀಕರಿಸಿದ ಮಸೂದೆಯನ್ನು ಕೂಡಲೇ ರದ್ದುಗೊಳಿಸಬೇಕು. ಇಲ್ಲವಾದಲ್ಲಿ ದೇಶವ್ಯಾಪಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಎಚ್ಚರಿಸಿದರು.