ಸ್ವಾತಂತ್ರ್ಯ ಅಮೃತ ಮಹೋತ್ಸವ: ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ತುಂಗಭದ್ರಾ ಜಲಾಶಯ, ಹಂಪಿಯ ಸ್ಮಾರಕ - ಆಜಾದಿ ಕಾ ಅಮೃತ ಮಹೋತ್ಸವ
ವಿಜಯನಗರ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಹಂಪಿಯ ಸ್ಮಾರಕಗಳು ಹಾಗೂ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಹಂಪಿಯ ವಿರೂಪಾಕ್ಷ ದೇವಸ್ಥಾನ, ವಿಜಯ ವಿಠಲ ದೇಗುಲದ ಪ್ರಾಂಗಣದಲ್ಲಿರುವ ಕಲ್ಲಿನ ತೇರು, ಸಪ್ತಸ್ವರ ಮಂಟಪ, ಕಡಲೆ ಕಾಳು ಗಣಪ, ಸಾಸಿವೆ ಕಾಳು ಗಣಪ ಸೇರಿದಂತೆ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ. ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆ ಆ.5 ರಿಂದ 15 ರವರೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ವ್ಯಾಪ್ತಿಯ ಐತಿಹಾಸಿಕ ದೇಗುಲ, ಸ್ಮಾರಕ ಹಾಗೂ ವಸ್ತು ಸಂಗ್ರಹಾಲಯಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.