ಕಲಬುರಗಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ, ದೇವಾಲಯಗಳಲ್ಲಿ ವಿಶೇಷ ಪೂಜೆ - ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ
ವೈಕುಂಠ ಏಕಾದಶಿ ಹಿನ್ನೆಲೆ ಕಾಳಗಿ ತಾಲೂಕಿನ ಸುಗೂರ ವೆಂಕಟೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ ಕಾರ್ಯಕ್ರಮಗಳು ಜರುಗಿದವು. ವೆಂಕಟೇಶ್ವರನಿಗೆ ವಿಶೇಷ ಅಭಿಷೇಕ, ಪುಷ್ಪಾಲಂಕಾರ, ಪೂಜೆ ನೇರವೇರಿಸಲಾಯಿತು. ವೈಕುಂಠ ಏಕಾದಶಿ ಪ್ರಯುಕ್ತ ಚೆಂಡು ಹೂವು, ಗುಲಾಬಿಯಿಂದ ದೇವಸ್ಥಾನ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ.