ಪುರಸಭೆ ಸಾಮಾನ್ಯ ಸಭೆಯಲ್ಲಿ ಕೋಲಾಹಲ: ಜೆಡಿಎಸ್ ಕಾಂಗ್ರೆಸ್ ಸದಸ್ಯರ ಮಧ್ಯೆ ಬಿಗ್ ಫೈಟ್ - ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರುಗಳ ನಡುವೆ ಗಲಾಟೆ
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಗದ್ದಲ ಉಂಟಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್ ನೇತೃತ್ವದಲ್ಲಿ ಮಂಗಳವಾರ 11 ಗಂಟೆಗೆ ಸಭೆ ಕರೆಯಲಾಗಿತ್ತು. ಆದರೆ, ಸಾಮಾನ್ಯ ಸಭೆಗೆ ಒಂದೂವರೆ ಗಂಟೆಗಳ ತಡವಾಗಿ ಅಧ್ಯಕ್ಷರು ಬಂದ ಕಾರಣ ವಾದ ವಿವಾದ ಉಂಟಾಯಿತು. ಬಳಿಕ ಅನುದಾನ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರುಗಳ ನಡುವೆ ಗಲಾಟೆಯುಂಟಾಗಿದ್ದು, ಇಡೀ ಸಭೆಯಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು. ಈ ವೇಳೆ ಸಭೆಯಲ್ಲಿದ್ದ ಕುರ್ಚಿಗಳನ್ನ ಸದಸ್ಯರು ಕಿತ್ತೆಸೆದರು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ರು. ಬಳಿಕ ಸಭೆಯನ್ನು ಮುಂದೂಡಲಾಯಿತು.