ಚಿತ್ರದುರ್ಗದಲ್ಲಿ ಮನ್ನೆಚ್ಚರಿಕಾ ಕ್ರಮಗಳೊಂದಿಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ - Chitradurga Department of Education
ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭವಾಗಿದೆ. ಮಕ್ಕಳು ಪರೀಕ್ಷಾ ತಯಾರಿಯೊಂದಿಗೆ ಕೊರೊನಾ ವಿರುದ್ಧ ಹೋರಾಡಲು ಪೂರ್ಣ ರೀತಿಯಿಂದ ಸನ್ನದ್ಧರಾಗಿ ಪರೀಕ್ಷಾ ಕೇಂದ್ರವನ್ನು ಪ್ರವೇಶಿಸಿದ್ದಾರೆ. ಪರೀಕ್ಷೆ ಬರೆಯಲು ಆಗಮಿಸಿದ್ದ ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಕೈಗಳಿಗೆ ಸ್ಯಾನಿಟೈಸರ್ ಹಚ್ಚಲಾಗುತ್ತಿದೆ. ಈ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಹಾಕಲಾಗಿದ್ದ ಬಾಕ್ಸ್‌ನಲ್ಲೇ ಮಕ್ಕಳು ನಿಂತು ಮೆಡಿಕಲ್ ಸ್ಕ್ರೀನಿಂಗ್ ಮಾಡಿಸಿಕೊಂಡಿದ್ದಾರೆ. ಮಾಸ್ಕ್ ಇಲ್ಲದೆ ಆಗಮಿಸಿದ ಮಕ್ಕಳಿಗೆ ಸೆಂಟ್ ಜೋಸೆಫ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಾಸ್ಕ್ ವಿತರಣೆ ಕೂಡ ಮಾಡಲಾಗಿದೆ.