ಚಾಮುಂಡಿ ಬೆಟ್ಟದ ಮೆಟ್ಟಿಲು ಹತ್ತುವ ಸ್ಪರ್ಧೆ.. 150ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗಿ - ಮೆಟ್ಟಿಲು ಹತ್ತಲು 150 ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿ
ಮೈಸೂರು: ದಸರಾ ಮಹೋತ್ಸವ ಹಿನ್ನೆಲೆ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಏರ್ಪಡಿಸಿದ್ದ, ಚಾಮುಂಡಿ ಬೆಟ್ಟದ ಮೆಟ್ಟಿಲು ಹತ್ತುವ ಸ್ಪರ್ಧೆಯಲ್ಲಿ ಸ್ಪರ್ಧಾಳುಗಳು ಫುಲ್ ಜೋಶ್ನಿಂದ ಪಾಲ್ಗೊಂಡಿದ್ದರು. 1000 ಮೆಟ್ಟಿಲು ಹತ್ತುವ ಈ ಸ್ಪರ್ಧೆಯಲ್ಲಿ 150ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿಯಾಗಿದ್ದರು. ಮಹಿಳೆಯರು, ಪುರುಷರು, ಕಿರಿಯರಿಗೆ ಪ್ರತ್ಯೇಕವಾಗಿ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಮೊದಲ ಬಹುಮಾನ 5 ಸಾವಿರ ರೂ. ಎರಡನೇ ಬಹುಮಾನ 3 ಸಾವಿರ ರೂ. ಮೂರನೇ ಬಹುಮಾನ 2 ಸಾವಿರ ರೂ. ನಿಗದಿ ಪಡಿಸಲಾಗಿದೆ. ಕಿರಿಯರ ವಿಭಾಗಕ್ಕೆ ಮೊದಲ ಬಹುಮಾನ 3 ಸಾವಿರ, ಎರಡನೇ ಬಹುಮಾನ 2 ಸಾವಿರ, ಮೂರನೇ ಬಹುಮಾನ 1 ಸಾವಿರ ನಿಗದಿ ಪಡಿಸಲಾಗಿದೆ. ಗೆದ್ದವರಿಗೆ ಪಾರಿತೋಷಕಗಳನ್ನು ನೀಡಲಾಗುತ್ತದೆ. ಬೆಟ್ಟ ಹತ್ತುವ ಸ್ಪರ್ಧೆಗೆ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಸಾಹಸ ಕ್ರೀಡಾ ಉಪ ಸಮಿತಿ ಅಧ್ಯಕ್ಷ ಕುಂಬರಳ್ಳಿ ಸುಬ್ಬಣ್ಣ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.