ಹೊಸಪೇಟೆ.. ದೇಶದ ಅತಿ ಎತ್ತರದ ಧ್ವಜ ಸ್ತಂಭದಲ್ಲಿ ರಾರಾಜಿಸುತ್ತಿರುವ ತ್ರಿವರ್ಣ - ndependence day
ವಿಜಯನಗರ: ಸ್ವಾತಂತ್ರ್ಯ ಮಹೋತ್ಸವದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ದೇಶದ ಅತಿ ಎತ್ತರದ ಧ್ವಜ ಸ್ತಂಭದಲ್ಲಿ ತ್ರಿವರ್ಣ ರಾರಾಜಿಸುತ್ತಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ದೇಶದ ಅತಿ ಎತ್ತರದ ಧ್ವಜಸ್ತಂಭ ಇದ್ದಾಗಿದ್ದು, 6 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. 405 ಅಡಿ ಎತ್ತರದ ಧ್ವಜಸ್ತಂಭದಲ್ಲಿ 80/120 ಅಡಿಯ ರಾಷ್ಟ್ರಧ್ವಜ ಹಾರಾಡುತ್ತಿದ್ದು, ನೋಡುಗರನ್ನು ಕೈ ಬೀಸಿ ಕರೆಯುತ್ತಿದೆ. ಇಂದು ಬೆಳಗಿನ ಜಾವ ಸಚಿವ ಆನಂದ ಸಿಂಗ್ ಅವರ ಸಮ್ಮುಖದಲ್ಲಿ ಪ್ರಾಯೋಗಿಕವಾಗಿ ಧ್ವಜಾರೋಹಣ ಮಾಡಲಾಯಿತು.