ಆ್ಯಂಬುಲೆನ್ಸ್‌ಗೆ ದಾರಿ ಬಿಟ್ಟು ಮಾನವೀಯತೆ ಮೆರೆದ ತಮಿಳುನಾಡು ಸಿಎಂ ಸ್ಟಾಲಿನ್ - ಎಂ.ಕೆ.ಸ್ಟಾಲಿನ್
ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆ್ಯಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟಿರುವ ಘಟನೆ ಚೆನ್ನೈನಲ್ಲಿ ನಡೆಯಿತು. ಕೊಂಯಬೇಡು ಸೇತುವೆ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ತಮಿಳುನಾಡು ಭಾಗವಹಿಸಿದ್ದ ಕುರಿತ ಮೊಬೈಲ್ ಎಕ್ಸಿಬಿಷನ್‌ಗೆ ಚಾಲನೆ ನೀಡಲು ತೆರಳುತ್ತಿದ್ದಾಗ ಆದೇ ಮಾರ್ಗವಾಗಿ ಬರುತ್ತಿದ್ದ ಆ್ಯಂಬುಲೆನ್ಸ್‌ಗೆ ಮುಂದೆ ಹೋಗಲು ದಾರಿ ಬಿಡುವಂತೆ ಸಿಎಂ ತಮ್ಮ ಎಸ್ಕಾರ್ಟ್ ಸಿಬ್ಬಂದಿಗೆ ಸೂಚಿಸಿದ್ದಾರೆ. ಕೂಡಲೇ ಸಿಬ್ಬಂದಿ ಆ್ಯಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಮಾನವೀಯತೆ ಮೆರೆದರು.