ಕಾವೇರಿ ನದಿಗೆ ಕುಟುಂಬ ಸಮೇತ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ - The CM bommai given bagina to the river Kaveri in mandya
ಮಂಡ್ಯ : ವಿಶ್ವ ವಿಖ್ಯಾತ ಕೆಆರ್‌ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುಟುಂಬ ಸಮೇತರಾಗಿ ಕಾವೇರಿ ನದಿಗೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಿಎಂ ಜೊತೆ ನೀರಾವರಿ ಸಚಿವ ಗೋವಿಂದ ಕಾರಜೋಳ, ಸಚಿವ ಗೋಪಾಲಯ್ಯ ಸೇರಿ ಹಲವರು ಭಾಗವಹಿಸಿದ್ದರು. ಬೆಂಗಳೂರಿನಿಂದ ನೇರವಾಗಿ ಮೈಸೂರಿಗೆ ಆಗಮಿಸಿ ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ ಬೊಮ್ಮಾಯಿ, ಮೊದಲು ಕಬಿನಿ ಜಲಾಶಯಕ್ಕೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಣೆ ಬಳಿಕ ಕೆಆರ್‌ಎಸ್ ಜಲಾಶಯಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು.