ಹಳ್ಳಿ ಕಡೆಗೆ ಡಿಸಿ ನಡಿಗೆ... ಅಲಂಕೃತ ಎತ್ತಿನಗಾಡಿಯಲ್ಲಿ ಗ್ರಾಮಸ್ಥರಿಂದ ಮೆರವಣಿಗೆ - the Collector was paraded in a decorated bullock cart In Tumkur
ತುಮಕೂರು: ತಾಲೂಕಿನ ಕೊಂತಿಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಬಂದಿದ್ದ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಅವರನ್ನು ಗ್ರಾಮಸ್ಥರು ಅಲಂಕೃತ ಎತ್ತಿನಗಾಡಿಯಲ್ಲಿ ಮೆರವಣಿಗೆ ಮೂಲಕ ಸ್ವಾಗತಿಸಿದರು. ಕಾರ್ಯಕ್ರಮದ ನಿಮಿತ್ತ ಗ್ರಾಮಕ್ಕೆ ಬಂದಿದ್ದ ಜಿಲ್ಲಾಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಚೆನ್ನಬಸಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳನ್ನು ಗ್ರಾಮಸ್ಥರು ಹೂವಿನಿಂದ ಅಲಂಕೃತವಾದ ಎತ್ತಿನಗಾಡಿಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಮೆರವಣಿಗೆ ಮೂಲಕ ಕರೆದುಕೊಂಡು ಹೋದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು.