ಚಾರ್ಮಾಡಿ ಘಾಟ್ನಲ್ಲಿ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಫಿ ಕ್ರೇಜ್: ವಾಹನ ಸವಾರರಿಗೆ ಇಕ್ಕಟ್ಟು - ಚಾರ್ಮಾಡಿ ಘಾಟ್ನಲ್ಲಿ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಫಿ ಕ್ರೇಜ್
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಮೂಲಕ ವಿಲ್ಲುಪುರಂ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುತ್ತದೆ. ಈ ರಸ್ತೆ ಮಧ್ಯೆ ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದು, ಇದರಿಂದ ವಾಹನ ಸವಾರರಿಗೆ ಪ್ರತಿನಿತ್ಯ ತೊಂದರೆಯಾಗುತ್ತಿದೆ. ರಸ್ತೆ ಮಧ್ಯೆ ವಿಡಿಯೋ, ಸೆಲ್ಫಿ ಕ್ಲಿಕ್ಕಿಸುತ್ತಿರುವ ಪ್ರವಾಸಿಗರಿಂದಾಗಿ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗಿ, ವಾಹನಗಳು ಸಾಲುಗಟ್ಟಿಕೊಂಡು ಸಾಗುವಂತಾಗಿದೆ. ಫೋಟೋ ತೆಗೆಯುವುದನ್ನು ನಿಷೇಧಿಸಿ ಸೂಚನಾ ಫಲಕ ಅಳವಡಿಸಿದ್ದರೂ, ರಸ್ತೆಯಲ್ಲಿ ನಿಂತು ಫೋಟೋ ತೆಗೆಯುವುದು ಮುಂದುವರೆದಿದೆ.