ಹಳಿ ಪಕ್ಕ ರೀಲ್ಸ್ ಮಾಡುವಾಗ ಯುವಕನಿಗೆ ಗುದ್ದಿದ ರೈಲು: ಭಯಾನಕ ವಿಡಿಯೋ - ರೀಲ್ಸ್ ಮಾಡುವಾಗ ರೈಲು ಡಿಕ್ಕಿ
ಹನುಮಕೊಂಡ(ತೆಲಂಗಾಣ) ಸೋಷಿಯಲ್ ಮೀಡಿಯಾದಲ್ಲಿ ಖ್ಯಾತಿಯಾಗಲು ಯುವಕ-ಯುವತಿಯರು ಹುಚ್ಚು ಸಾಹಸ ಮಾಡಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡ ಘಟನೆಗಳು ನಡೆಯುತ್ತಿವೆ. ತೆಲಂಗಾಣದ ಹನುಮಕೊಂಡ ಜಿಲ್ಲಾ ಕೇಂದ್ರದಲ್ಲಿ ಯುವಕನೊಬ್ಬ ಹುಚ್ಚಾಟ ಮಾಡಲು ಹೋಗಿ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ. ರೀಲ್ಸ್ ಮಾಡಲು ಯುವಕ ರೈಲ್ವೆ ಹಳಿ ಪಕ್ಕ ನಡೆದುಕೊಂಡು ಹೋಗಿದ್ದಾನೆ. ಇದನ್ನು ಮೂವರು ಸ್ನೇಹಿತರು ವಿಡಿಯೋ ಮಾಡುತ್ತಿದ್ದರು. ಈ ವೇಳೆ ರಭಸವಾಗಿ ಬಂದ ರೈಲು ಯುವಕನಿಗೆ ಗುದ್ದಿಕೊಂಡು ಗೋಗಿದೆ. ಇದರಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಸ್ನೇಹಿತರು ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.