ಕರ್ನಾಟಕ

karnataka

ETV Bharat / videos

ವಿದ್ಯುತ್ ಶಾರ್ಟ್​ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಮನೆ.. ಸಜೀವ ಸಮಾಧಿಯಾದ ಮಗು!

By

Published : May 26, 2022, 9:49 PM IST

ಪಲ್ನಾಡು(ಆಂಧ್ರಪ್ರದೇಶ): ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಮನೆಗೆ ಬೆಂಕಿ ತಗುಲಿ ಎರಡು ವರ್ಷದ ಮಗು ಸಜೀವ ದಹನವಾಗಿರುವ ಘಟನೆ ಪಲ್ನಾಡು ಜಿಲ್ಲೆಯ ನರಸರಾವ್ ಪೇಟೆ ಮಂಡಲದ ರಾವಿಪಾಡು ಎಂಬಲ್ಲಿ ನಡೆದಿದೆ. ಬುಧವಾರ ಮಧ್ಯರಾತ್ರಿ ಎಸ್ಸಿ ಕಾಲೋನಿಯಲ್ಲಿ ವಿದ್ಯುತ್ ತಂತಿ ತಗುಲಿರುವ ಪರಿಣಾಮ ಈ ಅವಘಡ ಸಂಭವಿಸಿದೆ. ಘಟನೆಯಿಂದಾಗಿ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀಡಿರುವ ಮಾಹಿತಿ ಮೇರೆಗೆ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬಾಲಕನ ಮೃತದೇಹ ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಏರಿಯಾ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು.

ABOUT THE AUTHOR

...view details