ಗ್ರಾಮೀಣಾಭಿವೃದ್ಧಿಯಂತಹ ಜನಸೇವೆಯನ್ನ ದೇಶಾದ್ಯಂತ ವಿಸ್ತರಿಸುವ ಆಕಾಂಕ್ಷೆಯಿದೆ: ಡಾ. ವೀರೇಂದ್ರ ಹೆಗ್ಗಡೆ - ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಾಧಿಕಾರಿ ಡಾ ಡಿ ವೀರೇಂದ್ರ
ಬೆಳ್ತಂಗಡಿ: ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಸೇವೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನಾಮನಿರ್ದೇಶನ ಆಗಿರುವುದರಿಂದ ಯಾವುದೇ ರೀತಿಯ ರಾಜಕೀಯ ಇರುವುದಿಲ್ಲ ಎಂದು ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಜೊತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಪ್ರಖ್ಯಾತರಾದ ಇತರೆ ಗಣ್ಯರನ್ನೂ ಸಹ ಗುರುತಿಸಿದ್ದಾರೆ. ನಾವು ಜಿಲ್ಲೆ, ತಾಲೂಕುಗಳ ಸೀಮಿತ ಪ್ರದೇಶಗಳಲ್ಲಿ ಮಾಡುತ್ತಿದ್ದ ವಿವಿಧ ರೀತಿಯ ಅಭಿವೃದ್ಧಿ ಕಾರ್ಯವನ್ನು ದೇಶದ ಇತರೆ ರಾಜ್ಯಗಳಿಗೂ ವಿಸ್ತರಿಸುವ ಅವಕಾಶ ಲಭಿಸಿದೆ. ಪ್ರಧಾನಿ ಮೋದಿಯವರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.