ಹಾಡು ಹಾಡಿ ನೃತ್ಯ ಮಾಡಿ ಗಮನ ಸೆಳೆದ ಜಿಲ್ಲಾಧಿಕಾರಿ! - ಉತ್ತರ ಕನ್ನಡ ಜಿಲ್ಲಾಧಿಕಾರಿಯಿಂದ ನೃತ್ಯ
ಕಾರವಾರ: ದಿನವಿಡೀ ಕಚೇರಿ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತೊಗಿಸಿಕೊಂಡು, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವ ಜಿಲ್ಲಾಧಿಕಾರಿ ಮಧುರಾ ಪಿಸುಮಾತಿಗೆ ಎಂದು ಕನ್ನಡ ಚಲನಚಿತ್ರದ ಹಾಡನ್ನು ಸುಶ್ರಾವ್ಯವಾಗಿ ಹಾಡಿ ನೆರೆದಿದ್ದವರನ್ನು ರಂಜಿಸುವುದರೊಂದಿಗೆ ಅಚ್ಚರಿಯನ್ನೂ ಮೂಡಿಸಿದರು. ಉತ್ತರಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ದಾಂಡೇಲಿಯಲ್ಲಿ ನಡೆದ ಕಂದಾಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ರಾತ್ರಿ ನಡೆದ ಮನರಂಜನಾ ಕಾರ್ಯಕ್ರಮದಲ್ಲಿ ಹಾಡು ಹೇಳಿ ನೃತ್ಯ ಮಾಡುತ್ತಾ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ನೆರೆದಿದ್ದ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಡಾ ಡಿಸಿ ಹಾಡಿಗೆ ಶಿಳ್ಳೆ ಹಾಕಿ, ಚಪ್ಪಾಳೆ ತಟ್ಟಿ ಖುಷಿಪಟ್ಟರು.