ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ಪೊಲೀಸರಿಂದ ಬೆದರಿಕೆ; ಡಿಸಿ ಕಚೇರಿ ಎದುರು ಪ್ರತಿಭಟನೆ - ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ಪೊಲೀಸರಿಂದ ಬೆದರಿಕೆ
ವಿಜಯವಾಡ(ಆಂಧ್ರಪ್ರದೇಶ): ಪೊಲೀಸರು ನಮಗೆ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ವಿಜಯವಾಡ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ವಿಜಯವಾಡ ಸರ್ಕಾರಿ ಆಸ್ಪತ್ರೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಪೋಷಕರು ಜಿಲ್ಲಾಧಿಕಾರಿ ಕಚೇರಿ ಮುಂದೆ ತಮ್ಮ ಅಳಲು ತೊಡಿಕೊಂಡಿದ್ದಾರೆ. ‘ದಿಶಾ’ ಪೊಲೀಸರು, ನಮಗೆ ಬೆದರಿಕೆ ಹಾಕುತ್ತಿದ್ದು, ಹಣಕ್ಕಾಗಿ ಪೀಡಿಸುತ್ತಿದ್ದಾರೆ. ನಮ್ಮ ಕುಟುಂಬದಲ್ಲಿ ಆಗಿರುವ ಅನ್ಯಾಯಕ್ಕಾಗಿ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿದರು.