ಟಿವಿ ನೋಡುವವರ ಸಂಖ್ಯೆ ಹೆಚ್ಚಾಗ್ತಿದೆ: ಎ.ಎಸ್.ಬಾಲಸುಬ್ರಮಣ್ಯ ಅಸಮಾಧಾನ - ಟಿವಿ ಒಂದು ಅತ್ಯಂತ ಪ್ರಭಾವಿ ಮಾಧ್ಯಮವಾಗಿದೆ
ಟಿವಿ ಒಂದು ಅತ್ಯಂತ ಪ್ರಭಾವಿ ಮಾಧ್ಯಮವಾಗಿದೆ. ನಾವೆಲ್ಲರೂ ನಮ್ಮ ದಿನನಿತ್ಯ ಟಿವಿ ನೋಡುವುದರಲ್ಲಿ ಅತ್ಯಂತ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದೇವೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೋ. ಎ.ಎಸ್.ಬಾಲಸುಬ್ರಮಣ್ಯ ಹೇಳಿದರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಟಿವಿ ನಿರೂಪಣಾ ಕೌಶಲ್ಯ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಂತ್ರಜ್ಞಾನ ಈಗ ಹೆಮ್ಮರದಂತೆ ಬೆಳೆದು ನಿಂತಿದೆ. ಟಿವಿಯಲ್ಲಿ ರಿಯಾಲಿಟಿ ಶೋಗಳು ಜಾಸ್ತಿಯಾದಂತೆ ಟಿವಿ ನೋಡುವವರ ಸಂಖ್ಯೆಯೂ ಹೆಚ್ಚಾಗ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.