ಕೋವಿಡ್-19 ಗೆ ಬಲಿಯಾದ ವೃದ್ಧನ ಅಂತ್ಯ ಸಂಸ್ಕಾರಕ್ಕೆ ತೆರಳಿದವರಲ್ಲಿ ಕೊರೊನಾ ಲಕ್ಷಣಗಳಿಲ್ಲ: ಡಿಸಿ ಸ್ಪಷ್ಟನೆ - ಸೋಂಕಿನ ವ್ಯಕ್ತಿ ಅಂತ್ಯಕ್ರಿಯೆ ತೆರಳಿರುವ ಕುರಿತು ಮಾಹಿತಿ
ಕೊರೊನಾ ಸೋಂಕಿನಿಂದ ಮೃತಪಟ್ಟ ಕಲಬುರಗಿಯ ವ್ಯಕ್ತಿಯ ಅಂತ್ಯಕ್ರಿಯೆಗೆ ತೆರಳಿದ್ದ ರಾಯಚೂರು ಜಿಲ್ಲೆಯ ಮೂವರ ಆರೋಗ್ಯ ತಪಾಸಣೆ ಮಾಡಲಾಗಿದೆ. ಅವರಲ್ಲಿ ಸೋಂಕಿನ ಲಕ್ಷಣ ಕಂಡು ಬಂದಿಲ್ಲವೆಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಅವರು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.