ವಿಡಿಯೋ: ಆರೋಪಿ ಬಂಧಿಸಲು ಬಂದ ಪೊಲೀಸರ ಮೇಲೆ ಮಹಿಳೆಯರಿಂದ ದೊಣ್ಣೆಗಳಿಂದ ಹಲ್ಲೆ! - ಪೊಲೀಸರ ಮೇಲೆ ಮಹಿಳೆಯರ ಹಲ್ಲೆ
ಸುಲ್ತಾನ್‌ಪುರ (ಉತ್ತರ ಪ್ರದೇಶ): ಆರೋಪಿಗಳನ್ನು ಬಂಧಿಸಲು ಆಗಮಿಸಿದ ಪೊಲೀಸರ ಮೇಲೆ ರೊಚ್ಚಿಗೆದ್ದ ಮಹಿಳೆಯರು ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಪೊಲೀಸರು ಗಾಯಗೊಂಡಿದ್ದು, ಜೈಸಿಂಗ್ಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಘಟನೆಯ ಬೆನ್ನಲ್ಲೇ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗಿದ್ದು, ಕೃತ್ಯದಲ್ಲಿ ಭಾಗಿಯಾದವರನ್ನು ಬಂಧಿಸಿದ್ದಾರೆ.