ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ಮತ್ತೆ ಅಧಿಕಾರಕ್ಕೆ ಬರಲ್ಲ: ಬಿಎಸ್ವೈ - etv bharat kannada
ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಜನ ಬಿಜೆಪಿ, ಮೋದಿ ಪರ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಭಾರತ ಜೊಡೋ ಯಾತ್ರೆ, ರಥಯಾತ್ರೆ ಸೇರಿ ಯಾವುದೇ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರಲ್ಲ. ಚುನಾವಣೆ ಪ್ರಚಾರ ನಿಮಿತ್ತ ನಾನು ಸೆ. 22ರಿಂದ ರಾಜ್ಯ ಪ್ರವಾಸ ಮಾಡುತ್ತೇನೆ. ಬಳ್ಳಾರಿ ವಿಮ್ಸ್ನಲ್ಲಿ ನಡೆದ ರೋಗಿಗಳ ಸಾವು ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ, ನೋಡೋಣ ಎಂದ ಬಿಎಸ್ವೈ, ಈ ಪ್ರಕರಣ ಸರ್ಕಾರಕ್ಕೆ ನಷ್ಟ ಆಗಲ್ವಾ ಎಂಬ ಪ್ರಶ್ನೆಗೆ ಮೌನ ವಹಿಸಿದರು.