ಮನೆಯಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಕೊಡಲಿಯಿಂದ ಹಲ್ಲೆ.. ಸಿಸಿಟಿವಿಯಲ್ಲಿ ಭೀಕರ ವಿಡಿಯೋ ಸೆರೆ - ಮನೆಯಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಕೊಡಲಿಯಿಂದ ಹಲ್ಲೆ
ಬಟಿಂಡಾ(ಪಂಜಾಬ್): ರಾತ್ರಿ ಮನೆಯಲ್ಲಿ ಮಲಗಿದ್ದ ಯುವಕನ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿರುವ ಘಟನೆ ಪಂಜಾಬ್ನ ಬಟಿಂಡಾದಲ್ಲಿ ನಡೆದಿದೆ. ಯುವಕ ಮಲಗಿದ್ದ ಸ್ಥಳಕ್ಕೆ ಆಗಮಿಸಿದ ವ್ಯಕ್ತಿಯೊಬ್ಬ ಕೊಡಲಿಯಿಂದ ಆತನ ಮೇಲೆ ಅನೇಕ ಸಲ ಹಲ್ಲೆ ಮಾಡಿದ್ದಾನೆ. ಇದರ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಘಟನೆಯಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಈ ಜಗಳವಾಗಿದ್ದು, ರಾತ್ರಿ ಮಗಲಿದ್ದಾಗ ಕೊಡಲಿಯಿಂದ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.