ಭದ್ರಾವತಿಯಲ್ಲಿ ವರುಣನ ಆರ್ಭಟ.. ಧರೆಗುರುಳಿದ ಮರ, ವಿದ್ಯುತ್ ಕಂಬಗಳು.. - ಭದ್ರಾವತಿ ಮಳೆಯಿಂದ ಧರೆಗುರುಳಿದ ಮರಗಳು
ಶಿವಮೊಗ್ಗ: ಭದ್ರಾವತಿ ತಾಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ ಮಳೆಯಿಂದ ಕೆಲ ಮನೆಗಳ ಮೇಲ್ಛಾವಣಿ ಹಾರಿ ಹೋಗಿವೆ. ಹಲವೆಡೆ ಮರಗಳು ಉರುಳಿಬಿದ್ದು, ಹತ್ತಾರು ವಿದ್ಯುತ್ ಕಂಬಗಳು ಧರೆಗುರುಳಿವೆ. ಗ್ರಾಮದ ಮಂಜಪ್ಪ ಎಂಬುವರ ಮನೆಯ ಮೇಲ್ಛಾವಣಿಗೆ ಹಾಕಿದ್ದ ಶೀಟುಗಳು ಹಾರಿ ಹೋಗಿದ್ದು, ಸಾವಿರಾರು ರೂಪಾಯಿ ನಷ್ಟವಾಗಿದೆ. ವಿದ್ಯುತ್ ಕಂಬಗಳು ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ವಿದ್ಯುತ್ ಕಡಿತಗೊಂಡು ಸಮಸ್ಯೆ ಉಂಟಾಗಿದ್ದರೂ ಮೆಸ್ಕಾಂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated : Feb 3, 2023, 8:21 PM IST