ಕರ್ನಾಟಕ

karnataka

ETV Bharat / bharat

11 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತರಿಂದ ಅತ್ಯಾಚಾರ! - RAPE ON MINOR GIRL - RAPE ON MINOR GIRL

11 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತರು ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

11 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತರಿಂದ ಅತ್ಯಾಚಾರ
11 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತರಿಂದ ಅತ್ಯಾಚಾರ (ಸಾಂದರ್ಭಿಕ ಚಿತ್ರ (ETV Bharat))

By PTI

Published : May 26, 2024, 9:32 PM IST

ಸೀತಾಪುರ್​(ಉತ್ತರ ಪ್ರದೇಶ):11 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತರು ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ರಾಂಪುರ ಕಲಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಸೀತಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಕಿ ಆಡುಗಳನ್ನು ಮೇಯಿಸಲು ಇಟ್ಟಿಗೆ ಗೂಡು ಬಳಿ ಹೋದಾಗ ಅಲ್ಲೇ ಇದ್ದ ಬಾಲಕರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಬಾಲಕಿ ಘಟನೆಯನ್ನು ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾಳೆ. ನಂತರ ಆಕೆಯ ತಾಯಿ ಪೊಲೀಸ್​ ಠಾಣೆಗೆ ಬಂದು ನೀಡಿದ ದೂರಿನ ಆಧಾರದ ಮೇಲೆ, ಮೂವರು ಬಾಲಕರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 ಡಿಬಿ (12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಗುವಿನ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಶಿಕ್ಷೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ಸಂಬಂಧಿತ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ಆರೋಪಿಗಳೆಲ್ಲರೂ 15 ವರ್ಷ ವಯಸ್ಸಿನವರಾಗಿದ್ದಾರೆ. ಆಂತರಿಕ ರಕ್ತಸ್ರಾವದಿಂದಾಗಿ ಗಂಭೀರ ಸ್ಥಿತಿಯಲ್ಲಿರುವ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಸಿಧೌಲಿ ಸರ್ಕಲ್ ಇನ್ಸ್​ಪೆಕ್ಟರ್​ ಅಲೋಕ್ ಪ್ರಸಾದ್ ಪ್ರತಿಕ್ರಿಯಿಸಿ, ಬಾಲಕಿಯ ಮೇಲೆ ಮೂವರು ಅಪ್ರಾಪ್ತರು ಅತ್ಯಾಚಾರವೆಸಗಿದ್ದಾರೆ. ಬಾಲಕಿಯ ಸ್ಥಿತಿ ಗಂಭೀರವಾಗಿದ್ದು, ಆಕೆಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದ್ದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಧ್ವನಿ ಬದಲಿಸುವ ಆ್ಯಪ್​ನಿಂದ ಶಿಕ್ಷಕಿಯಂತೆ ಮಾತನಾಡಿ 7 ವಿದ್ಯಾರ್ಥಿನಿಯರ ಅತ್ಯಾಚಾರ: ಆರೋಪಿ ಅರೆಸ್ಟ್​ - MP Rape Case

ABOUT THE AUTHOR

...view details