ಶ್ರೀನಗರ(ಜಮ್ಮು- ಕಾಶ್ಮೀರ):ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನದ ನಡುವೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ಮೊರೆತ ಕೇಳಿಬಂದಿದೆ. ಭದ್ರತಾ ಪಡೆಗಳ ಗುಂಡಿನ ದಾಳಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾರಾಮುಲ್ಲಾದಲ್ಲಿ ಗುರುವಾರ ಉಗ್ರರು ಅಡಗಿ ಕುಳಿತಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಂದು ಉಗ್ರರ ದಾಳಿಗೆ ಪ್ರತಿ ದಾಳಿ ನಡೆಸಿದ ಭದ್ರತಾ ಸಿಬ್ಬಂದಿ ಇಬ್ಬರನ್ನು ಹತ್ಯೆಗೈದಿದ್ದಾರೆ.
ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ ನೌಪೋರಾದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಗುರುವಾರ ರಾತ್ರಿಯ ವಿರಾಮದ ನಂತರ ಶುಕ್ರವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ. ಗಾಯಗೊಂಡ ಸೇನಾ ಸಿಬ್ಬಂದಿಯನ್ನು ಸೇನಾಸ್ಪತ್ರೆಗೆ ರವಾನಿಸಲಾಗಿದೆ.
ಎನ್‌ಕೌಂಟರ್ ನಡೆದ ಸ್ಥಳದ ಸಮೀಪ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಈ ಪ್ರದೇಶದಿಂದ ಭಯೋತ್ಪಾದಕರನ್ನು ಹೊಡೆದೋಡಿಸುವ ಕಾರ್ಯಾಚರಣೆ ಮುಂದುವರಿದಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:ನೈಜರ್, ಚಾಡ್ನಿಂದ ಸೇನಾಪಡೆಗಳನ್ನು ಹಿಂಪಡೆಯಲು ಅಮೆರಿಕ ಸಿದ್ಧತೆ - troops withdrawal from niger